ನನ್ನ ಕೊಲೆ ಯತ್ನದ ಬಗ್ಗೆ ದೂರು ಕೊಟ್ಟಿದ್ದೇನೆ, ಪೊಲೀಸರು ಎಫ್‌ಐಆರ್​ ದಾಖಲಿಸಿಲ್ಲ- ಸಿ.ಟಿ ರವಿ

Oplus_131072

ಚಿಕ್ಕಮಗಳೂರು: ಸುವರ್ಣಸೌಧದಲ್ಲೇ ನನ್ನ ಮೇಲೆ ದಾಳಿಗೆ ಪ್ರಯತ್ನ ನಡೆದಿತ್ತು. ಪೊಲೀಸರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದೂರಿನ ಮೇರೆಗೆ ಕ್ರಮ ಕೈಗೊಳ್ಳುತ್ತಾರೆ. ಆದರೆ, ನಾನು ನೀಡಿದ ದೂರಿನ ಮೇಲೆ ಯಾಕೆ ಪೊಲೀಸರು ಕ್ರಮ ಕೈಗೊಳ್ಳಲಿಲ್ಲ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನ ಪರಿಷತ್​ನಲ್ಲಿ ನನ್ನ ತಾಯಿ, ತಂಗಿ, ಪತ್ನಿಯ ಬಗ್ಗೆ ಮಾತಾಡಿದರು. ಈ ಮಹಾತಾಯಿ ಮಾತನಾಡಿದ್ದನ್ನು ತಾವೆಲ್ಲರೂ ನೋಡಿದ್ದೀರಿ. ಅದು ಸರಿಯೇ? ಎಂದು ಪ್ರಶ್ನೆ ಮಾಡಿದರು. ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, ರಾತ್ರಿಯಿಡೀ 4 ಜಿಲ್ಲೆಗಳಲ್ಲಿ ವ್ಯಾನ್​ನಲ್ಲಿ ನನ್ನನ್ನು ಸುತ್ತಾಡಿಸಿದ್ದಾರೆ. ಗೂಂಡಾಗಳು ನನ್ನ ಮೇಲೆ ಹಲ್ಲೆಗೈದ ಆಡಿಯೋ, ವಿಡಿಯೋ ಇದೆ. ಈಬಗ್ಗೆ ಸಂಪೂರ್ಣ ತನಿಖೆಆಗಬೇಕು ಎಂದು ಎಂಎಲ್​ಸಿ ಸಿ.ಟಿ. ರವಿ ಹೇಳಿದ್ದಾರೆ.

ಈಗಾಗಲೇ ವಿಧಾನ ಪರಿಷತ್ ಸಭಾಪತಿಗೆ ದೂರು ಕೊಟ್ಟಿದ್ದೇವೆ. ಈ ಬಗ್ಗೆ ಸಭಾಪತಿ ಏನು ಕ್ರಮ ಕೈಗೊಳ್ಳುತ್ತಾರೆ ಅಂತಾ ನೋಡಬೇಕು. ಖಾನಾಪುರದ ಲ್ಲಿ ನನ್ನ ಕೊಲೆ ಯತ್ನದ ಬಗ್ಗೆ ದೂರು ಕೊಟ್ಟಿದ್ದೇನೆ. ಆದರೆ ಪೊಲೀಸರು ಎಫ್​ಐಆರ್​ ದಾಖಲಿಸಿಲ್ಲ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!