ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಯಾವರ ಚರ್ಚ್‌ಗೆ ಭೇಟಿ
ಉಡುಪಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಉದ್ಯಾವರ ಚರ್ಚ್ ಗೆ ಭೇಟಿ ನೀಡಿ ಧರ್ಮ ಗುರುಗಳಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮೀಣ ಕಾಂಗ್ರೆಸ್ಸಿನ ಅಧ್ಯಕ್ಷರಾದ ನಿತಿನ್ ಜೆ ಸಾಲಿಯನ್. ಕೋಟೆ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ, ಗ್ರಾಮ ಪಂಚಾಯತ್ ಸದಸ್ಯರಾದ ಅಬಿದ್ ಆಲಿ, ಮಾಜಿ ಸದಸ್ಯರಾದ ಕಿರಣ್ ಕುಮಾರ್ ಹಾಗೂ ಉದ್ಯಾವರ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮಾತುಲ್ಲ ಉಪಸ್ಥಿತರಿದ್ದರು.