ಪಡುಬಿದ್ರಿ: ಡಿ.29 ‘ಅಂತರ್ ರಾಜ್ಯ ಬಂಟ ಕ್ರೀಡೋತ್ಸವ -2024’
ಪಡುಬಿದ್ರಿ, ಡಿ. 24: ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ವೇರ್ ಟ್ರಸ್ಟ್ ವತಿಯಿಂದ ಡಿ. 29ರಂದು ಬಂಟರ ಭವನ ಬಳಿಯ ದಿ| ರಮೇಶ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಅಂತರ್ ರಾಜ್ಯ ಬಂಟ ಕ್ರೀಡೋತ್ಸವ ‘ -2024’ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಬಂಟರಸಂಘದ ಅಧ್ಯಕ್ಷ ಐಕಳಬಾವ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ, ಎಂಆರ್‌ಜಿ ಗ್ರೂಪ್‌ನ ಪ್ರಾಯೋಜಕತ್ವ ದಲ್ಲಿ ‘ಎಂಆರ್‌ಜಿ ಟ್ರೋಫಿ’ ಲಾಂಛನದಡಿ ಕ್ರೀಡೋತ್ಸವ ನಡೆಯಲಿದೆ. ಎಂಆರ್‌ಜಿ ಗ್ರೂಪ್ ಸಿಎಂಡಿ ಡಾ| ಕೆ.ಪ್ರಕಾಶ್ ಶೆಟ್ಟಿ ಉದ್ಘಾಟಿಸುವರು. ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ದೀಪ ಬೆಳಗಿಸುವರು. ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕ್ರೀಡಾಕೂಟದ ಧ್ವಜಾ ರೋಹಣಗೈಯುವರು ಎಂದರು.
ಸ್ಪೀಕರ್ ಯು.ಟಿ. ಖಾದರ್, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರುವರು. ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ‘ಬಂಟ ಸಾಧಕ ಪ್ರಶಸ್ತಿ’ ನೀಡಿ ಸಮ್ಮಾನಿಸಲಾಗುವುದು. ಯುಪಿಸಿಎಲ್ ಅದಾನಿ ಅಧ್ಯಕ್ಷ ಕಿಶೋರ್ ಆಳ್ವ ಮುಂಬಯಿ ಉದ್ಯಮಿ ಕೆ.ಎಂ. ಶೆಟ್ಟಿ ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜಶೆಟ್ಟಿ, ಪುಣೆ ಉದ್ಯಮಿ ಚಂದ್ರಹಾಸ ಶೆಟ್ಟಿ ಪುಚೊಟ್ಟುಬೀಡು, ಮುಂಬಯಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ ಅವರು ವಿವಿಧ ಕ್ರೀಡಾಂಗಣಗಳನ್ನು ಉದ್ಘಾಟಿಸುವರು. ಪುಣೆ ಉದ್ಯಮಿ ಸೀತಾರಾಮ ಶೆಟ್ಟಿ ಪುಚೊಟ್ಟುಬೀಡು ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡುವರು.
ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಪೂಜಾರಿ, ರಾಜ್ಯ, ಅಂತಾರಾಜ್ಯ ಬಂಟರ ಸಂಘಗಳ ಅಧ್ಯಕ್ಷರು ಪಾಲ್ಗೊಳ್ಳುವರು. ಸಮಾರೋಪದಲ್ಲಿ ಕೆ. ಪ್ರಕಾಶ್ ಶೆಟ್ಟಿ ಬಹುಮಾನ ವಿತರಿಸುವರು.
ಬಂಟ್ಸ್ ವೆಲ್ವೇರ್ ಟ್ರಸ್ಟ್ ಅಧ್ಯಕ್ಷ ಎರ್ಮಾಳು ಶಶಿಧರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎಂ. ಮೋಹನ್ ಆಳ್ವ ಸಮಾರೋಪ ಭಾಷಣ ಮಾಡುವರು. ‘ಬಂಟ ಕ್ರೀಡಾರತ್ನ ಪ್ರಶಸ್ತಿ’ ಪ್ರದಾನ, ಕ್ರೀಡಾಳುಗಳಿಗೆ ಪ್ರೋತ್ಸಾಹಧನ ವಿತರಣೆ ಸಹಿತ ಗಣ್ಯರ ಉಪಸ್ಥಿತಿಯಲ್ಲಿಡಾ| ಕೆ. ಪ್ರಕಾಶ್ ಶೆಟ್ಟಿ, ಡಾ। ಎಂ.ಎನ್. ರಾಜೇಂದ್ರ ಕುಮಾರ್, ಕ್ರೀಡಾಂಗಣದ ಸ್ಥಳದಾನಿ ಮುಂಬಯಿ ಉದ್ಯಮಿ ಕರುಣಾಕರ ಪೂಜಾರಿ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದರು.
ಆಕರ್ಷಕ ಪಥ ಸಂಚಲನ, ವಾಲಿ ಬಾಲ್, ತ್ರೋಬಾಲ್, ಕಬ್ಬಡಿ ಪಂದ್ಯಾಟ, ಹಗ್ಗಜಗ್ಗಾಟ ಸ್ಪರ್ಧೆಗಳುಇವೆ. ವಿಜೇತರಿಗೆ ಟ್ರೋಫಿ, ನಗದು ಬಹುಮಾನ ಇದೆ. ಬಂಟರ ಸಂಘದ ಸದಸ್ಯರಿಂದ ನೃತ್ಯ ವೈವಿಧ್ಯ, ಸಾಂಸ್ಕೃತಿಕ ಕಾರ್ಯಕ್ರಮವಿದೆ.
ಎರ್ಮಾಳು ಶಶಿಧರ ಶೆಟ್ಟಿ ಸಿರಿ ಮುಡಿ ದತ್ತಿನಿಧಿ ಸ್ಥಾಪಕಾಧ್ಯಕ್ಷ ಸಾಂತೂರು ಭಾಸ್ಕರ ಶೆಟ್ಟಿ ಮಾಜಿ ಅಧ್ಯಕ್ಷ ನವೀನ್‌ಚಂದ್ರ ಜೆ. ಶೆಟ್ಟಿ ಕಾವ್ಯದರ್ಶಿ – ಪ್ರಕಾಶ್‌ಶೆಟ್ಟಿ ಪಡುಹಿತ್ತು, ಕೋಶಾಧಿಕಾರಿ ರವಿ ಶೆಟ್ಟಿ ಕ್ರೀಡಾ ಕೂಟದ ಸಂಚಾಲಕ ವಿನಯ್ ಶೆಟ್ಟಿ ಸಹಸಂಚಾಲಕಿ ಶರ್ಮಿಳಾ ಶೆಟ್ಟಿ ಮಹಿಳಾ ವಿಭಾಗದ ಅಧ್ಯಕ್ಷೆ ಜ್ಯೋತಿ ಶೆಟ್ಟಿ ಯುವ ಬಂಟರ ವಿಭಾ ಗದ ಅಧ್ಯಕ್ಷ ನವೀನ್ ಎನ್. ಶೆಟ್ಟಿ ಕೂಟದ ಉಸ್ತುವಾರಿ ರಿತೇಶ್ ಕುಮಾರ್ ಶೆಟ್ಟಿ ಪ್ರಮುಖರಾದ ಜಯ ಶೆಟ್ಟಿ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಹಾಜರಿದ್ದರು.