ಪಾದರಕ್ಷೆ ಧರಿಸಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಶಪಥ!

ಕೊಯಮತ್ತೂರು: ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಕಾಲಿಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಅವರು ಶಪಥ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮ ವರದಿ ಮಾಡಿದೆ.

ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ಕಿರುಕುಳ ಪ್ರಕರಣವನ್ನು ಪೊಲೀಸರು ನಿಭಾಯಿಸಿದ ರೀತಿಯನ್ನು ವಿರೋಧಿಸಿದ್ದಾರೆ.

ಪ್ರಕರಣದಲ್ಲಿ ಸಂತ್ರಸ್ತೆಯ ಹೆಸರು, ಫೋನ್ ಸಂಖ್ಯೆ ಮತ್ತು ಇತರ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಅವರು, “ಎಫ್‌ಐಆರ್ ಹೇಗೆ ಸಾರ್ವಜನಿಕ ಡೊಮೇನ್ ಅನ್ನು ಪ್ರವೇಶಿಸಿತು? ಎಫ್‌ಐಆರ್ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದೀರಿ. ಇಂತಹ ಎಫ್‌ಐಆರ್ ಬರೆದು ಸೋರಿಕೆ ಮಾಡಿದ್ದಕ್ಕೆ ಪೊಲೀಸರು ಮತ್ತು ಡಿಎಂಕೆಗೆ ನಾಚಿಕೆಯಾಗಬೇಕು,’’ ಎಂದು ಕಾನೂನು ಸಚಿವ ಎಸ್ ರೇಗುಪತಿ ವಿರುದ್ಧ ವಾಗ್ದಾಳಿ ನಡೆಸಿದರು.

“ನಿರ್ಭಯಾ ನಿಧಿ ಎಲ್ಲಿಗೆ ಹೋಯಿತು? ಅಣ್ಣಾ ವಿಶ್ವವಿದ್ಯಾಲಯದ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾ ಏಕೆ ಇರಲಿಲ್ಲ?” ಎಂದು ಅವರನ್ನು ಪ್ರಶ್ನಿಸಿದ್ದಾರೆ.

“ಇನ್ನು ಮುಂದೆ ಸಾರ್ವಜನಿಕ ಪ್ರತಿಭಟನೆಗಳಿಲ್ಲ, ಏಕೆಂದರೆ ನೀವು ಪ್ರತಿಭಟನೆಗೆ ಸೇರುವ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಮದುವೆ ಮಂಟಪದಲ್ಲಿ ಇರಿಸುತ್ತೀರಿ. ಹೀಗಾಗಿ ನಾಳೆಯಿಂದ ಕಾರ್ಯಕರ್ತರು ಮನೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ,’’ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!