ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆ- ವಾಹನ ಸಂಚಾರದಲ್ಲಿ ಬದಲಾವಣೆ

ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿರುತ್ತದೆ.

ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.

ಕಲ್ಸಂಕ ವೃತ್ತ :

1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.

2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.

ಕರಾವಳಿ ಜಂಕ್ಷನ್ :

1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.

2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು‌ ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.

ಮಲ್ಪೆ
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರುವುದು.

ಸಾರ್ವಜನಿಕರು ಡಿ. 28 ರಿಂದ ಜ .01 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.

Leave a Reply

Your email address will not be published. Required fields are marked *

error: Content is protected !!