ಪಡುಬಿದ್ರಿ: ಅಮಾವಾಸ್ಯೆ ಸಮುದ್ರ ಸ್ನಾನಕ್ಕೆ ತೆರಳಿದ ಇಬ್ಬರು ನೀರುಪಾಲು- ನಾಲ್ವರ ರಕ್ಷಣೆ

ಉಡುಪಿ: ಅಮವಾಸ್ಯೆಯಂದು ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ ಇಬ್ಬರು ಯುವಕರು ಸಮುದ್ರಪಾಲಾದ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ ಇಂದು ಬೆಳಿಗ್ಗೆ ನಡೆದಿದೆ.

ಎಳ್ಳಮವಾಸ್ಯೆ ಪ್ರಯುಕ್ತ ಹೆಜಮಾಡಿ ಸಮುದ್ರಕ್ಕೆ ತೀರ್ಥ ಸ್ನಾನ ಮಾಡಲೆಂದು ತೆರಳಿದ್ದ 6 ಜನರ ಪೈಕಿ ಇಬ್ಬರು ನೀರಿನ ಸೆಳೆತಕ್ಕೆ ಮುಳುಗಿ ಮೃತಪಟ್ಟರೆಂದು ಸ್ಥಳೀಯರು ತಿಳಿಸಿದ್ದಾರೆ.

ಹೆಜಮಾಡಿಯ ಅಕ್ಷಯ್(20) ಮತ್ತು ಚಿರಾಗ್ ಅಮೀನ್(17) ಮೃತಪಟ್ಟ ದುರ್ದೈವಿಗಳು. ರಕ್ಷಿಸಲ್ಪಟ್ಟ ನಾಲ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!