ಉಡುಪಿ,ಜ.4:ವ್ಯಕ್ತಿಯೊಬ್ಬರು ವಾಸವಾಗಿರುವ ಮನೆಯಹೊರಗಡೆ ಜಂತಿಗೆ ನೇಣುಬಿಗಿದು ಆತ್ಮಹತ್ಯೆಗೈದಿರುವ ಘಟನೆ ಶುಕ್ರವಾರ ರಾತ್ರಿ ಕೊರಂಗ್ರಪಾಡಿಯಲ್ಲಿ ನಡೆದಿದೆ.
ಮೃತವ್ಯಕ್ತಿಯನ್ನು ವಸಂತ ಕೋಟ್ಯಾನ್(59) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮೃತರು,ಕ್ಯಾಟರಿಂಗ್ ವ್ಯವಹಾರ ನಡೆಸುತ್ತಿದ್ದರು.ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಬರೆದಿಟ್ಟಿರುವ ಚೀಟಿ ಪೋಲಿಸರಿಗೆ ಲಭ್ಯವಾಗಿದೆ.
ಘಟನಾ ಸ್ಥಳದಲ್ಲಿದ್ದು ಪಿ.ಎಸ್.ಐ ಪುನೀತ್ ಕುಮಾರ್,ತನಿಖಾ ಸಹಾಯಕಿ ನೇತ್ರಾವತಿ ಕಾನೂನು ಪ್ರಕ್ರಿಯೆ ನಡೆಸಿದರು.ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು.ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಪ್ರಗತಿಯಲ್ಲಿದೆ.