ಸಾಮಾಜಿಕ ಜಾಲತಾಣದಲ್ಲಿ ರಮೇಶ್ ಕಾಂಚನ್ ವಿರುದ್ದ ಸುಳ್ಳು ಸುದ್ದಿ- ದೂರು ದಾಖಲು

ಉಡುಪಿ: ನಗರ ಸಭೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿರುವ ವಿಷಯನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವ ವ್ಯಕ್ತಿಯ ವಿರುದ್ದ ಕ್ರಮಕೈಗೊಳ್ಳುವಂತೆ ಉಡುಪಿ ನಗರಸಭೆಯ ವಿಪಕ್ಷ ನಾಯಕ ರಮೇಶ್ ಕಾಂಚನ್ ಉಡುಪಿ ಸೆನ್ ಠಾಣೆಗೆ ದೂರು ನೀಡಿದ್ದಾರೆ.

ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅವರು ಡಿ.24ರಂದು ನಡೆದ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಉಡುಪಿಯ ಶಾಸಕರು ಮಸೀದಿ, ದೇವಸ್ಥಾನ ಹಾಗು ಚರ್ಚುಗಳ ವಿಷಯದ ಬಗ್ಗೆ ಚರ್ಚೆಗೆ ತೆಗೆದುಕೊಂಡಾಗ ಕಾಂಚನ್ ಅವರು ಯಾವುದೇ ಧರ್ಮಕ್ಕೆ ಅಥವಾ ಯಾವುದೇ ಸಮುದಾಯದ ವಿರುದ್ಧ ಅಪಮಾನ ಮಾಡುವ ರೀತಿ ಮಾತನಾಡಿಲ್ಲ. ಹಾಗೂ ಧಾರ್ಮಿಕ ಸಂಸ್ಥೆಗಳ ಬಗ್ಗೆ ಯಾವುದೇ ಕ್ರಮಕೈಗೊಳ್ಳುವ ಮೊದಲು ಸರಿಯಾಗಿ ಯೋಚಿಸಿ ಮುಂದುವರಿಯಬೇಕು ಎಂದು ಹೇಳಿರುವುದಾಗಿ ತಿಳಿಸಿದ್ದು, ಆದರೆ ಒಬ್ಬ ವ್ಯಕ್ತಿ ನಾನು ಹಿಂದೂ ಧರ್ಮಕ್ಕೆ ಅವಹೇಳನ ಮಾಡಿರುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುತ್ತಾನೆ.

ನಾನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಿ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಮಾಡಿರುತ್ತಾನೆ. ಹಾಗೆಯೇ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಆ ಮೂಲಕ ಪ್ರಯತ್ನಿಸಿರುತ್ತಾನೆ. ಆದರಿಂದ ಈ ಸುಳ್ಳು ಸುದ್ದಿ ಹಬ್ಬಿಸುವ ಆ ವ್ಯಕ್ತಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸೆನ್ ಠಾಣೆಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!