ಎಂಸಿಸಿ ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
ಮಂಗಳೂರು: ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್‌ಲೋಬೋ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ರಾಜ್ಯ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಡಿ.17ರಂದು ಉಳಾಯಿಬೆಟ್ಟುವಿನ ಫರ್ಮಾಯಿಯ ನಿವಾಸಿ ಮನೋಹರ್ ಪಿರೇರಾ ಎಂಬವರು ತನ್ನ ಸಾವಿಗೆ ಅನಿಲ್ ಲೋಬೋ ಕಾರಣ ಎಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿದ್ದರು. ಈ ಕುರಿತು ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಅನಿಲ್ ಲೋಬೋ ಅವರನ್ನು ಬಂಧಿಸಲಾಗಿತ್ತು.
ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಕೋರಿ ಸಲ್ಲಿಸಿದ ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಹೈಕೋರ್ಟ್‌ನಲ್ಲಿ ಆತನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಗೊಳಿಸುವಂತೆ ಹಾಕಲಾದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೊಳಪಡಿಸಿ, ಆತ್ಮಹತ್ಯೆಗೆ ಪ್ರಚೋದನೆ(ಬಿಎನ್‌ಎಸ್ ಸೆಕ್ಷನ್ 108) ನೀಡಿದ ಬಗ್ಗೆ ಸಮಾಧಾನಕರ ಅಂಶಗಳು ಕಂಡು ಬರದ ಕಾರಣ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿದೆ.