ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ- ಹೊತ್ತಿ ಉರಿದ ವಾಹನಗಳು: ಪಣಿಯೂರಿನ ಯುವಕ ಮೃತ್ಯು
ಉಡುಪಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರು ಘಟನೆ ಜ.10ರ ಶುಕ್ರವಾರ ತಡರಾತ್ರಿ ಉದ್ಯಾವರ ಬಲೈಪಾದೆ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.
ಅಪಘಾತದ ಸಂದರ್ಭ ಲಾರಿಯ ಅಡಿಭಾಗದಲ್ಲಿ ಬೈಕ್ ಸಿಲುಕಿಕೊಂಡಿದ್ದು ಈ ವೇಳೆ ಬೈಕಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬೈಕ್ ಹಾಗೂ ಲಾರಿ ಬೆಂಕಿಗಾಹುತಿಯಾಗಿದೆ. ಇದರಿಂದಾಗಿ ಸವಾರ ಪಣಿಯೂರು ನಿವಾಸಿ ಅವಿನಾಶ್ ಆಚಾರ್ಯ (19) ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.