ಭವ್ಯ ರಾಮಮಂದಿರ ತಲೆಎತ್ತಿ ಕಳೆಯುತ್ತಿದೆ ವರುಷ: ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ
ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಗೊಂಡು ಒಂದು ವರ್ಷ ತುಂಬುತ್ತಿದೆ. ಬಹಳ ವಿಜೃಂಭಣೆಯಿಂದ ಲೋಕಾರ್ಪಣೆಗೊಂಡ ರಾಮಮಂದಿರ ಇದೀಗ ಎಲ್ಲರ ಕಣ್ಮನ ಸೆಳೆಯುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ವರ್ಷ ಪೂರೈಸುವ ಅಯೋಧ್ಯೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದೆ.
ಕಳೆದ ವರ್ಷ ಜ.22 ರಂದು ಉದ್ಘಾಟನೆಗೊಂಡ ರಾಮಮಂದಿರ ವರುಷ ಕಳೆಯುವುದರೊಳಗೆ ದೇಶದ ನಂಬರ್ ಒನ್ ಪ್ರವಾಸಿ ತಾಣವಾಗಿ ಹೊರಹೊಮ್ಮಿದೆ. ಈವರೆಗೆ ಸುಮಾರು 13ಸಾವಿರ ಕೋಟಿ ಪ್ರವಾಸಿಗರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಇಂದಿನಿಂದ ಮೂರು ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಈ ಕಾರ್ಯಕ್ರಮವನ್ನು ವೀಕ್ಷಿಸಲು ಸುಮಾರು 5 ಸಾವಿರ ಜನರರಿಗೆ ಅವಕಾಶವನ್ನು ಕಲ್ಪಸಲಾಗಿದೆ ಎನ್ನಲಾಗಿದೆ.
ಸುಮಾರು 1,800 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ ರಾಮಮಂದಿರದ ಮುಖ್ಯ ವಿಗ್ರಹವನ್ನು ಕರ್ನಾಟಕದ ಶಿಲ್ಪಿ ಕೆತ್ತಿರುವುದು ವಿಶೇಷ. ಮೈಸೂರಿನ ಅರುಣ್ ಯೋಗಿರಾಜ್ ಎನ್ನುವರ ಕೈಚಳಕದಲ್ಲಿ ಮೂಡಿಬಂದ ವಿಗ್ರಹ ಆಯ್ಕೆಯಾಗಿರುವುದು ಕನ್ನಡಿಗರಿಗೆ ಹೆಮ್ಮೆಯ ಸಂಗತಿ.
ಇನ್ನು, ದೀಪಾವಳಿ ಸಂದರ್ಭದಲ್ಲಿ ಸರಯೂ ನದಿಯ ದಂಡೆಯ ಮೇಲೆ 22ಲಕ್ಷ ಹಣತೆಗಳನ್ನು ಬೆಳಗಿಸುವುದರ ಮೂಲಕ ಸರ್ಕಾರ ಗಿನ್ನಿಸ್ ದಾಖಲೆ ನಿರ್ಮಿಸಿದ್ದು, ಹಬ್ಬ ಹರಿದಿನಗಳ ಸಂದರ್ಭದಲ್ಲಿ ರಾಮಮಂದಿರಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿರುವುದು ವಿಶೇಷ.





