ಆಶಾಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್: ಮಾಸಿಕ ಗೌರವಧನ ಹೆಚ್ಚಳ
ಬೆಂಗಳೂರು: ಗೌರವಧನ ಹೆಚ್ಚಳಕ್ಕಾಗಿ ಆಶಾಕಾರ್ಯಕರ್ತೆಯರು ಈಗಾಗಲೇ ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಈ ಬಾರಿಯ ಸಿದ್ದರಾಮಯ್ಯ ಸರ್ಕಾರ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ತಿಂಗಳು 10 ಸಾವಿರ ರೂ. ಗೌರವಧನ ನೀಡಲು ರಾಜ್ಯಸರ್ಕಾರ ಸಮ್ಮತಿ ಸೂಚಿಸಿದೆ.
ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಗೌರವಧನವನ್ನು ಹೆಚ್ಚಳಗೊಳಿಸಲಾಗಿದ್ದು, ಇದರೊಂದು ಆಶಾ ಕಾರ್ಯಕರ್ತೆಯರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ಅನಾರೋಗ್ಯ ಕಂಡುಬಂದಲ್ಲಿ ಗರಿಷ್ಠ ಮೂರು ತಿಂಗಳವರೆಗೆ ಗೌರವಧನ ಸಹಿತ ರಜೆ ಮಂಜೂರು ಮಾಡುವಂತೆ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.
ಇದೇ ವೇಳೆ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಸರ್ಕಾರ ಎಂದಿಗೂ ಹತ್ತಿಕ್ಕುವುದಿಲ್ಲ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಸರ್ಕಾರ ಎಂದಿಗೂ ನಿಮ್ಮೊಂದಿಗಿದೆ ಎಂದು ಹೇಳುವ ಮೂಲಕ ಆಶಾಕಾರ್ಯಕರ್ತೆಯರಿಗೆ ಭರವಸೆ ನೀಡಿದ್ದಾರೆ.