ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ಹಲವೆಡೆ 2 ದಿನ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕುಸಿತ ಹಿನ್ನೆಲೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಹವಾಮಾನ ಇಲಾಖೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಜನವರಿ 13 ಮತ್ತು 14ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಜನವರಿ 13ರಂದು ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ. ಜನವರಿ 14ರಂದು ಮೈಸೂರು, ಮಂಡ್ಯ, ಕೊಡಗು, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನುಳಿದಂತೆ ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!