ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆ- ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆ
ಬ್ರಹ್ಮಾವರ: ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಉಪ್ಪಿನಕೋಟೆ ಎಂಬಲ್ಲಿ ಭಾನುವಾರ ನಡೆದಿದೆ.
ಮೃತರನ್ನು ಉಪ್ಪಿನಕೋಟೆ ನಿವಾಸಿ ಸುರೇಶ್ (60) ಎಂದು ಗುರುತಿಸಲಾಗಿದೆ.
ವಿಪರೀತ ಮದ್ಯವ್ಯಸನಿ ಆಗಿದ್ದ ಸುರೇಶ್ ಎಂಬಾತ ತನ್ನ ಮನೆಯಲ್ಲಿಯೇ ವಿಷ ಸೇವಿಸಿದ್ದು, ವಿಷಯ ತಿಳಿದ ಕೂಡಲೇ ಸುರೇಶ್ ಅವರ ಮಗ ಸಂದೇಶ್ ತಂದೆಯನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದಾರೆ. ಆದರೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಸುರೇಶ್ ಮೃತಪಟ್ಟಿದ್ದಾರೆ.ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.