ಕುಂದಾಪುರ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್‌ ಸೇವನೆ: ಯುವಕರಿಬ್ಬರ ಬಂಧನ

ಕುಂದಾಪುರ: ಅಮಲು ಪದಾರ್ಥ ಸೇವಿಸಿದ ಅನುಮಾನದ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಮಾದಕ ವ್ಯಸನಿಗಳಿಬ್ಬರನ್ನು ವಶಕ್ಕೆ ಪಡೆದಿರುವ ಘಟನೆ ಕುಂದಾಪುರ ತಾಲೂಕು ಬಸ್ರೂರು ಗ್ರಾಮದ ಬಸ್‌ ನಿಲ್ದಾಣದ ಬಳಿ ಭಾನುವಾರ ಮಧ್ಯಾಹ್ನ ನಡೆದಿದೆ.

ಬಂಧಿತ ಆರೋಪಿಗಳನ್ನು ನವನೀತ ಮತ್ತು ಹರ್ಷ ಎಂದು ಗುರುತಿಸಲಾಗಿದೆ. ಬಸ್ರೂರು ಬಸ್‌ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ಯುವಕರು ಅಮಲು ಪದಾರ್ಥ ಸೇವಿಸಿರುವ ಕುರಿತು ಅನುಮಾನ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ದಾಳಿ ನಡೆಸಿ ಸ್ಥಳದಲ್ಲೇ ಇಬ್ಬರೂ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ವೈದ್ಯಾಧಿಕಾರಿಯವರಿಂದ ಆರೋಪಿಗಳು ಗಾಂಜಾ ಸೇವಿಸಿರುವ ಕುರಿತು ದೃಢಪಡಿಸಿಕೊಂಡ ಪೊಲೀಸರು ಆರೋಪಿಗಳ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೂತನ್‌ ಡಿ.ಇ, ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆ ಪಿಎಸ್‌ಐ, ಸಿಬ್ಬಂದಿ ರಾಜು ಬಿ ಹಾಗೂ ಕಿಶನ್‌ ಗೌಡ ಅವರು ರೌಂಡ್ಸ್‌ನಲ್ಲಿರುವ ವೇಳೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!