ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು…!
ಕಾಸರಗೋಡು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕಾಸರಗೋಡಿನ ಕುಂಬಳೆ ಎಂಬಲ್ಲಿ ನಡೆದಿದೆ.
ಮೃತ ಮಗುವನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿಯ ಪುತ್ರ ಅನಾಸ್ ಎಂದು ಗುರುತಿಸಲಾಗಿದೆ. ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು, ಸಿಪ್ಪೆಯ ಒಂದು ತುಂಡನ್ನು ಮನೆಯವರು ಹೊರತೆಗೆದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆ ಕೊಂಡೊಯ್ದಿದ್ದಾರೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಗಂಟಲಲ್ಲಿ ಏನೂ ಸಿಲುಕಿಲ್ಲ ಎಂದು ಹೇಳಿದ್ದಾರಿಂದ ಮನೆಯವರು ಮಗುವನ್ನು ಮನೆಗೆ ವಾಪಸ್ ಕರೆತಂದಿದ್ದಾರೆ. ಬಳಿಕ ಬೆಳಿಗ್ಗೆ ಮತ್ತೆ ಮಗುವಿಗೆ ಉಸಿರಾಟದ ಸಮಸ್ಯೆ ಕಡುಬಂದಿದ್ದು, ತಕ್ಷಣವೇ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಬಾಲಕ ಬದುಕುಳಿಯಲಿಲ್ಲ ಎನ್ನಲಾಗಿದೆ.