ಉಡುಪಿ ವಕೀಲರ ಸಂಘ: ಮಾ.1-2 ರಂದು ರಾಜ್ಯಮಟ್ಟದ ಕ್ರೀಡಾಕೂಟ
ಉಡುಪಿ: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷದ ಶತಮಾನೋತ್ಸವ ರಜತ ಮಹೋತ್ಸವದ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷ-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2 ರಂದು ಆಯೋಜಿಸಲಾಗಿದೆ ಎಂದು ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ.
ಅವರು ಸೋಮವಾರ, ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಎಮ್‌ಜಿಎಮ್ ಕಾಲೇಜಿನ ಎಎಲ್ಎನ್ ರಾವ್ ಕ್ರೀಡಾಂಗಣದಲ್ಲಿ ಪಂದ್ಯಾಟಗಳನ್ನು ನಡೆಸಲಾಗುತ್ತಿದೆ. ಪುರುಷರ ಕ್ರಿಕೆಟ್ ಪಂದ್ಯಾಟವನ್ನು ಇದೇ ಪ್ರಥಮ ಬಾರಿಗೆ ಹೊನಲು ಬೆಳಕಿನಲ್ಲಿ ನಡೆಸಲಾಗುತ್ತಿದೆ ಎಂದರು.
ಉದ್ಘಾಟನೆ……
ಪಂದ್ಯಾಕೂಟವನ್ನು ಮಾರ್ಚ್ 1 ರ ಸಂಜೆ 4 ಗಂಟೆಗೆ
ಸುಪ್ರೀಂಕೋರ್ಟಿನ ನ್ಯಾಯಧೀಶೆ ನ್ಯಾ| ಬಿ.ವಿ.ನಾಗರತ್ನ ಉದ್ಘಾಟಿಸಲಿದ್ದಾರೆ. ಕರ್ನಾಟಕ ಹೈಕೋರ್ಟಿನ ನ್ಯಾಯಾಲಯದ ಮುಖ್ಯ ನ್ಯಾಯಧೀಶ ನ್ಯಾ| ಎನ್.ವಿ. ಅಂಜಾರಿಯಾ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗು ಉಡುಪಿ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ನ್ಯಾ|ಇ.ಎಸ್ ಇಂದಿರೇಶ್, ಕರ್ನಾಟಕ ಹೈಕೋರ್ಟಿನ ನ್ಯಾಯಧೀಶ ನ್ಯಾ| ರಾಜೇಶ್ ರೈ ಕೆ, ಮಾಹೆ ಸಹ ಕುಲಾಧಿಪತಿ ಡಾ.ಎಚ್.ಎಸ್. ಬಲ್ಲಾಳ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್. ಗಂಗಣ್ಣವರ್ ಉಪಸ್ಥಿತರಿರಲಿದ್ದಾರೆ ಎಂದರು.
ಸಮಾರೋಪ……
ಮಾರ್ಚ್ 2 ರ ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಮತ್ತು ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್‍ನ ಸದಸ್ಯ ಪಿ.ಪಿ. ಹೆಗ್ಡೆ ಸಮಾರೋಪ ಭಾಷಣ ಮಾಡಲಿರುವರು. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆ ವಹಿಸಲಿರುವರು. ಶಾಸಕ ಯಶ್ಪಾಲ್ ಸುವರ್ಣ ಅತಿಥಿಯಾಗಿ ಭಾಗವಹಿಸಲಿರುವರು ಎಂದು ನುಡಿದರು.
ಸ್ಪರ್ಧೆಯಲ್ಲಿ ಭಾಗವಹಿಸುವ ತಂಡಗಳಿಗೆ ಊಟ ಮತ್ತು ವಸತಿ ಸೌಲಭ್ಯವನ್ನು ಉಡುಪಿ ವಕೀಲರ ಸಂಘದ ವತಿಯಿಂದ ವ್ಯವಸ್ಥೆಗೊಳಿಸಲಾಗಿದೆ.
ವಿಜೇತ ತಂಡಗಳಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಗುವುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಉಡುಪಿಯ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಿಕ ದಂಡಾಧಿಕಾರಿ ಸಂತೋಷ್ ಶ್ರೀವಸ್ಸ, ಹಿರಿಯ ನ್ಯಾಯವಾದಿಗಳಾದ ಎಂ.ಶಾಂತರಾಮ್ ಶೆಟ್ಟಿ, ಮಟ್ಟಾರ್ ರತ್ನಾಕರ್ ಹೆಗ್ಡೆ, ಉಡುಪಿ ವಕೀಲರ ಸಂಘದ ಉಪಾಧ್ಯಕ್ಷ ಮಿತ್ರ ಕುಮಾರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ ಎ.ಆರ್., ಸಾಂಸ್ಕೃತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕ್ರೀಡಾ ಕಾರ್ಯದರ್ಶಿ ಸುಮಿತ್ ಎಸ್ ಹೆಗ್ಡೆ, ಖಜಾಂಚಿ ಗಂಗಾಧರ ಎಚ್.ಎಮ್., ಜಂಟಿ ಕಾರ್ಯದರ್ಶಿ ರವೀಂದ್ರ ಬೈಲೂರು, ಸತೀಶ್ ಎಂ. ಪೂಜಾರಿ ವಿವಿಧ ಉಪಸಮಿತಿಗಳ ಸಂಚಾಲಕರಾದ ದಿವಾಕರ್ ಎಮ್ ಶೆಟ್ಟಿ, ಕೆ.ಆರ್ ರಾಮಚಂದ್ರ ಅಡಿಗ, ಬಿ. ನಾಗರಾಜ್, ಪ್ರವೀಣ್ ಎಮ್ ಪೂಜಾರಿ, ಆರೂರ್ ಸುಕೇಶ್ ಶೆಟ್ಟಿ, ಅಸಾದುಲ್ಲಾ ಕಟಪಾಡಿ, ಗಣೇಶ್ ಕುಮಾರ್ ಮಟ್ಟು, ಪಂದ್ಯಾಟದ ಉಸ್ತುವಾರಿಗಳಾದ ಸಚಿನ್ ಕುಮಾರ್ ಶೆಟ್ಟಿ, ಗಂಗಾಧರ ಶೇರಿಗಾರ್, ಯೋಗಿಶ್ ಕುಮಾರ್ ಸಾಲಿಗ್ರಾಮ, ಸ್ಯಾಂಡ್ರಾ ಆ್ಯನ್ಸಿಲ್ಲಾ ಡಿಸೋಜಾ ಉಪಸ್ಥಿತರಿದ್ದರು.
ಪಂದ್ಯಾಟದ ಬ್ರೋಶರನ್ನು ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಕಿರಣ್.ಎಸ್. ಗಂಗಣ್ಣನವರ್ ಹಾಗು ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಧೀಶ ಮತ್ತು ಮುಖ್ಯ ನ್ಯಾಯಿಕ ದಂಡಾಧಿಕಾರಿ ಪುರುಷೋತ್ತಮ್ ಎಮ್ ಬಿಡುಗಡೆಗೊಳಿಸಿದರು.
ಪ್ರಶಸ್ತಿಗಳ ವಿವರ…..
ಕ್ರಿಕೆಟ್ ಪಂದ್ಯಾಟ
ವಿಜೇತ ತಂಡಕ್ಕೆ ರೂ. 1,11,111 ಮತ್ತು ಶಾಶ್ವತ ಫಲಕ
ರನ್ನರ್ ಅಪ್ ತಂಡಕ್ಕೆ ರೂ.55,555, ಶಾಶ್ವತ ಫಲಕ
ತೃತೀಯ ಸ್ಥಾನಕ್ಕೆ ರೂ. 25,555 ಮತ್ತು ಶಾಶ್ವತ ಫಲಕ
ನಾಲ್ಕನೇ ಸ್ಥಾನಕ್ಕೆ 11,111 ರೂ ಮತ್ತು ಶಾಶ್ವತ ಫಲಕ
ಪುರುಷರ ವಾಲಿಬಾಲ್
ವಿಜೇತ ತಂಡಕ್ಕೆ ರೂ. 66,666 ಮತ್ತು ಶಾಶ್ವತ ಫಲಕ
ರನ್ನರ್ ಅಪ್ ತಂಡಕ್ಕೆ ರೂ. 33,333, ಶಾಶ್ವತ ಫಲಕ
ತೃತೀಯ ಸ್ಥಾನಕ್ಕೆ ರೂ. 22,222 ಮತ್ತು ಶಾಶ್ವತ ಫಲಕ
ಮಹಿಳೆಯರ ತ್ರೋಬಾಲ್
ವಿಜೇತ ತಂಡಕ್ಕೆ ರೂ.33,333 ಮತ್ತು ಶಾಶ್ವತ ಫಲಕ,
ರನ್ನರ್ ಅಪ್ ತಂಡಕ್ಕೆ ರೂ.22,222, ಶಾಶ್ವತ ಫಲಕ
ತೃತೀಯ ಸ್ಥಾನಕ್ಕೆ ರೂ.11,111 ಮತ್ತು ಶಾಶ್ವತ ಫಲಕ
ಪುರುಷ ಮತ್ತು ಮಹಿಳೆಯರ ಶಟಲ್ ಬ್ಯಾಡ್ಮಿಂಟನ್
ವಿಜೇತ ತಂಡಕ್ಕೆ ರೂ. 11,111 ಮತ್ತು ಶಾಶ್ವತ ಫಲಕ
ರನ್ನರ್ ಅಪ್ ತಂಡಕ್ಕೆ ರೂ. 6,666, ಶಾಶ್ವತ ಫಲಕ
ಅಲ್ಲದೆ ಪ್ರತೀ ವಿಭಾಗದಲ್ಲಿನ ಉತ್ತಮ ಆಟಗಾರರಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುವುದು.