ಬ್ರಹ್ಮಾವರ/ ಉಡುಪಿ: ಪ್ರತ್ಯೇಕ ಪ್ರಕರಣ ಇಬ್ಬರು ಆತ್ಮಹತ್ಯೆ

ಬ್ರಹ್ಮಾವರ, ಜ.14: ವಿಪರೀತ ಮದ್ಯ ಸೇವನೆ ಚಟದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜ.9ರಂದು ರಾತ್ರಿ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಉಪ್ಪಿನ ಕೋಟೆಯ ಸುರೇಶ್ (60) ಎಂಬವರು ಜ.12ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಬ್ರಹ್ಮಾವರ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಡುಪಿ: ದೃಷ್ಠಿದೋಷ ಖಾಯಿಲೆಯಿಂದ ಬಳಲುತ್ತಿದ್ದ ಮೂಡ ನಿಡಂಬೂರು ಗ್ರಾಮದ ಗೋಪಾಲಕೃಷ್ಣ(61) ಎಂಬವರು ಜ.13ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!