ಟಿಪ್ಪರ್‌ಗೆ ಆಂಬುಲೆನ್ಸ್ ಡಿಕ್ಕಿ: ಚಾಲಕನ ವಿರುದ್ಧ ದೂರು ದಾಖಲು
ಕಾಪು: ಟಿಪ್ಪರ್‌ಗೆ ಹಿಂಬದಿಯಿಂದ ಬಂದು ಆಂಬುಲೆನ್ಸ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ಜಖಂಗೊಂಡಿರುವ ಘಟನೆ ಕಾಪುವಿನ ಉಳಿಯಾರಗೋಳಿ ಗ್ರಾಮದ ಪೊಲಿಪು ಜಂಕ್ಷನ್ ಬಳಿ ಸೋಮವಾರ ಸಂಜೆ ನಡೆದಿದೆ.
ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಲಕ್ಷ್ಮಣ ಎನ್ನುವವರು ಟಿಪ್ಪರ್ ನಲ್ಲಿ ಕೆಂಪು ಕಲ್ಲನ್ನು ತುಂಬಿಸಿಕೊಂಡು ಮಂಗಳೂರಿನಿಂದ ಉಡುಪಿಗೆ ಬರುತ್ತಿರುವಾಗ ಹಿಂಬದಿಯಿಂದ ಆಂಬುಲೆನ್ಸ್ ಬಂದು ಡಿಕ್ಕಿ ಹೊಡೆದಿದೆ. ಆಂಬುಲೆನ್ಸ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದರೂ ಅತೀ ವೇಗವಾಗಿ ಬಂದು ಟಿಪ್ಪರ್ ಗೆ ಡಿಕ್ಕಿ ಹೊಡೆದಿರುವ ಪರಿಣಾಮ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆಂಬುಲೆನ್ಸ್ ಚಾಲಕ ಹನುಮಪ್ಪನ ನಿರ್ಲಕ್ಷತನವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಪ್ರಕರಣ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.