ಉಚ್ಚಿಲ: ರಾ. ಹೆದ್ದಾರಿಯಲ್ಲಿ ಮುಂದುವರಿದ ಅಪಘಾತಗಳ ಸರಮಾಲೆ- ಪಾದಚಾರಿ ಮೃತ್ಯು

ಪಡುಬಿದ್ರಿ : ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಉಚ್ಚಿಲದಲ್ಲಿ ನಡೆದಿದೆ.

ಮೃತರನ್ನು ಹಾವೇರಿ ಮೂಲದ ಮಂಜುನಾಥ್ (48) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಇಲಾಖೆ ವಿರುದ್ದ ಆಕ್ರೋಶ: ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ದಿನನಿತ್ಯ ಎಂಬಂತೆ ಅಪಘಾತಗಳು ನಡೆಯುತ್ತಿದೆ. ತಿಂಗಳ ಅಂತರದಲ್ಲೇ ಆರು ಮಂದಿ ಅಪಘಾತದಿಂದ ಮೃತಪಟ್ಟಿದ್ದು, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿಯೇ ಅಪಘಾತಗಳು ನಡೆಯುತ್ತಿದ್ದೆ. ಪಾದಚಾರಿಗಳು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚಾರಿಸುವಂತಾಗಿದೆ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *

error: Content is protected !!