ಉಡುಪಿ ಆರ್ಟ್ ಆಫ್ ಲಿವಿಂಗ್: ರಕ್ತದಾನ ಶಿಬಿರ ಉದ್ಘಾಟನೆ
ಉಡುಪಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಭಾನುವಾರ ರಕ್ತದಾನ ಶಿಬಿರ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು.
ಕಾಪು ತಹಶೀಲ್ದಾರ್ ಡಾ.ಪ್ರತಿಭಾ ಆರ್, ಉಡುಪಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಚ್.ಅಶೋಕ್ ಹಾಗೂ ರಕ್ತ ನಿಧಿ ವಿಭಾಗದ ಮುಖ್ಯಸ್ತೆ ವೀಣಾ ಅವರು ದೀಪ ಬೆಳಗಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಬಳಿಕ ಪ್ರತಿಭಾ ಅವರು ಮಾತನಾಡಿ ಇವತ್ತಿನ ದಿನಗಳಲ್ಲಿ ರಕ್ತದಾನದ ಅವಶ್ಯಕತೆ ಮತ್ತು ರಕ್ತದಾನ ಮಾಡುವುದರಿಂದ ನಮ್ಮ ಶರೀರದಲ್ಲಿ ಆಗುವ ಲಾಭಗಳ ಬಗ್ಗೆ ವಿವರಿಸಿದರು.
ಡಾ. ಅಶೋಕ್ ಅವರು ಶಿಬಿರವನ್ನು ಆಯೋಜಿಸಿದ ಬಗ್ಗೆ ಮೆಚ್ಚುಗೆ ಮಾತುಗಳನ್ನು ಆಡಿದರು. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶಿಕ್ಷಕಿ ಸುನೀತ ನಾಯಕ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಉಡುಪಿಯ ಜಿಲ್ಲೆಯ ಶಿಕ್ಷಕರ ಸಂಯೋಜಕ ದಿನೇಶ್ ಕುಂದಾಪುರ, ಶಿಕ್ಷಕ ವೃಂದ, ಪದಾಧಿಕಾರಿಗಳಾದ ನಾಗೇಶ್ ಶೇರಿಗಾರ್, ನಾಗೇಶ್ ನಾಯಕ್, ಧನರಾಜ್ ಶೇರಿಗಾರ್ ಹಾಗೂ ಸಾಧಕರು ಉಪಸ್ಥಿತರಿದ್ದರು.