ಕಿನ್ನಿಮೂಲ್ಕಿ: ಗ್ಯಾಸ್ ಟ್ಯಾಂಕರ್ ಪಲ್ಟಿ- ತಪ್ಪಿದ ಭಾರೀ ಅನಾಹುತ!
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್‌ವೊಂದು ಪಲ್ಟಿಯಾದ ಘಟನೆ ಉಡುಪಿ ಕಿನ್ನಿಮೂಲ್ಕಿ ಸಮೀಪ ರಾ.ಹೆ. 66ರಲ್ಲಿ ಇಂದು ಬೆಳಿಗ್ಗೆ 7.20ರ ಸುಮಾರಿಗೆ ಸಂಭವಿಸಿದೆ.
ಗುಜರಾತ್‌ನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಿನ್ನಿಮೂಲ್ಕಿ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿದೆ. ಚಾಲಕ ಹಾಗೂ ಕ್ಲಿನರ್ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಹೆದ್ದಾರಿ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ಮೂಲಕ ಟ್ಯಾಂಕರ್ ಅನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.