ಬಡಗಬೆಟ್ಟು ಕ್ರೆ.ಕೋ-ಆ .ಸೊಸೈಟಿ: ನವದುರ್ಗಾ ಲೇಖನ ಯಜ್ಞ ಸಂಕಲ್ಪ ಕಾರ್ಯಕ್ರಮ
ಉಡುಪಿ, ಜ.19: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನದ ನವದುರ್ಗಾ ಲೇಖನಯಜ್ಞದ ಸಂಕಲ್ಪ ಕಾರ್ಯಕ್ರಮವು ಬಡಗಬೆಟ್ಟು ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಇಂದು ಜರಗಿತು.
ವಿವಿಧ ಸಹಕಾರ ಸಂಸ್ಥೆಗಳ ಒಂಭತ್ತು ಸ್ತ್ರೀಯರು ನವದೀಪವನ್ನು ಪ್ರಜ್ವಲಿಸಿ ದೇವಿಗೆ ಆರತಿ ಬೆಳಗಿಸಿದರು. ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಮನೋಹರ್ ಎಸ್.ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿಯ ಅಧ್ಯಕ್ಷ ಕೆ.ರಘುಪತಿ ಭಟ್ ಮಾತನಾಡಿದರು.
ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ಮುಖ್ಯ ಸಂಚಾಲಕಿ ಗೀತಾಂಜಲಿ ಸುವರ್ಣ, ಉಡುಪಿ ಇಂಡಸ್ಟ್ರಿಯಲ್ ಕೋ-ಆ.ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಹೆಗ್ಡೆ, ಗುರುನಿತ್ಯಾನಂದ ಕ್ರೆಡಿಟ್ ಕೋ-ಆ.ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಶೆಟ್ಟಿ ಹಾಗೂ ಉಡುಪಿ ಗೃಹ ನಿರ್ಮಾಣ ಸಹಕಾರ ಸಂಘದ ಪ್ರಧಾನ ವ್ಯವಸ್ಥಾಪಕ ಅಶೋಕ್ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಬಡಗಬೆಟ್ಟು ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತುಗಳನ್ನಾಡಿ ಸ್ವಾಗತಿಸಿದರು. ಬಡಗಬೆಟ್ಟು ಸೊಸೈಟಿಯ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ವಂದಿಸಿದರು.