ಪರ್ಕಳ: ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್‌ಗೆ ದಾಳಿ- ಓರ್ವನ ಬಂಧನ, ಮಹಿಳೆಯ ರಕ್ಷಣೆ
ಮಣಿಪಾಲ: ಪರ್ಕಳದ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖಚಿತ ಮಾಹಿತಿಯಂತೆ ಮಣಿಪಾಲ ಪೊಲೀಸರು ದಾಳಿ ಮಾಡಿ ಓರ್ವ ಆರೋಪಿಯನ್ನು ಬಂಧಿಸಿದ್ದು, ಮಹಿಳೆಯನ್ನು ರಕ್ಷಿಸಲಾಗಿದೆ.
ಜನವರಿ 19 ರಂದು ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ಪರ್ಕಳ ಬಸ್ ನಿಲ್ದಾಣದ ಹಿಂಭಾಗದಲ್ಲಿ ಇರುವ ಶ್ರೀಸಾಯಿ ಲಾಡ್ಜ್‌ನಲ್ಲಿ ಅಕ್ರಮ ಲಾಭಕ್ಕಾಗಿ ಬಲವಂತವಾಗಿ ಮಹಿಳೆಯರನ್ನು ಇರಿಸಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ.
ದಾಳಿ ಮಾಡಿದ ಸಂದರ್ಭದಲ್ಲಿ ನೊಂದ ಮಹಿಳೆಯನ್ನು ರಕ್ಷಿಸಿ, ಆರೋಪಿತ ಶರಣಪ್ಪನನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.