ಉಡುಪಿ: ಮಿನಿ ಉದ್ಯೋಗ ಮೇಳ

ಉಡುಪಿ, ಜ.20: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜನವರಿ 21 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸ ಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸ ಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!