“ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜ.31ರಂದು ತೆರೆಗೆ

ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಸ್- ಹರಿಪ್ರಸಾದ್ ರೈಯವರ ಸಹಯೋಗದಲ್ಲಿ, ಆನಂದ್ ಎನ್. ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ, ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಜ.31ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ“ ಎಂದು ಚಿತ್ರದ ನಿರ್ದೇಶಕ ರಾಹುಲ್ ಅಮೀನ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

‘ರಾಜ್ ಸೌಂಡ್ಸ್ ಆಂಡ್ ಲೈಟ್ಸ್’ ತಂಡದ ಬಹುತೇಕ ತಂತ್ರಜ್ಞರು, ಕಲಾವಿದರು ಇಲ್ಲಿ, ದುಡಿದಿದ್ದಾರೆ. ವಿನೀತ್ ಕುಮಾರ್ ನಾಯಕ ನಟನಾಗಿ ಸಮತಾ ಅಮೀನ್ ನಾಯಕಿಯಾಗಿ ಹಾಗೂ ತುಳು ಚಿತ್ರರಂಗದ ಹಿರಿಯ ಕಲಾವಿದರಾದ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಚೈತ್ರಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಬೈಲೂರು, ಉಮೇಶ್ ಮಿಜಾರ್, ಸಂದೀಪ್ ಶೆಟ್ಟಿ, ಮಾಣಿಬೆಟ್ಟು, ರೂಪ ವರ್ಕಾಡಿ, ರವಿ ರಾಮಕುಂಜ ಮತ್ತಿತರರು ಅಭಿನಯಿಸಿದ್ದಾರೆ. ಸೃಜನ್ ಕುಮಾರ್ ತೋನ್ಸೆ ಸಂಗೀತ ನೀಡಿದ್ದಾರೆ.

ಛಾಯಾಗ್ರಾಹಕರಾಗಿ ವಿಷ್ಣು ಪ್ರಸಾದ್ ಪಿ, ಸಂಕಲನ ವಿಶಾಲ್ ದೇವಾಡಿಗ, ವಸ್ತ್ರ ವಿನ್ಯಾಸ ವರ್ಷ ಆಚಾರ್ಯ ಹಾಗೂ ನವೀನ್ ಕುಮಾರ್ ಶೆಟ್ಟಿ ಮತ್ತು ವಿನಾಯಕ ಆಚಾರ್ಯ ನೃತ್ಯ ಸಂಯೋಜಿಸಿದ್ದಾರೆ. ‘ಪವನ್ ಕುಮಾರ್‌, ನಿತಿನ್‌ ರಾಜ್ ಶೆಟ್ಟಿ, ಸುಹಾನ್ ಪ್ರಸಾದ್, ಭರತ್ ಕುಮಾರ್ ಗಟ್ಟಿ, ಗಣೇಶ್ ಕೊಲ್ಯ, ಅಶ್ವಿನಿ ರಕ್ಷಿತ್, ಕ್ಷಿತಿಂದ್ರ ಕೋಟೆಕಾರ್, ಮಿತ್ರಂಪಾಡಿ ಜಯರಾಮ್ ರೈ, ಕಿರಣ್ ಶೆಟ್ಟಿ, ಸ್ಪೂಸಿಕ್ ಆಚಾರ್ಯ ಸಹ ನಿರ್ಮಾಪಕರಾಗಿದ್ದಾರೆ.

ಪ್ರೊಡಕ್ಷನ್ ಮ್ಯಾನೇಜರ್ ಕಾರ್ತಿಕ್ ರೈ ಅಡ್ಯನಡ್ಕ ಹಾಗೂ ನಿತಿನ್ ಶೇರಿಗಾರ್ ಮತ್ತು ಆಯುಷ್ಮಾನ್ ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ. ಈಗಾಗಲೇ ಈ ಚಿತ್ರವನ್ನು ಯುಎಇ ರಾಷ್ಟ್ರದಲ್ಲಿ, ಮೋನಿಷ ಶರತ್ ಶೆಟ್ಟಿ, , ಹರೀಶ್ ಬಂಗೇರ, ಹರೀಶ್ ಶೇರಿಗಾರ್, ಗಿರೀಶ್ ನಾರಾಯಣ್, ದೀಪಕ್ ಕುಮಾರ್ ರವರು ಅರ್ಪಿಸಲು ಮುಂದಾಗಿದ್ದು, ದುಬೈನ ಗಮ್ಮತ್ ಕಲಾವಿದರ ಪೈಕಿ 5 ಕಲಾವಿದರಾದ ಚಿದಾನಂದ ಪೂಜಾರಿ, ಗಿರೀಶ್ ನಾರಾಯಣ್, ಡೋನಿ ಕೊರಿಯ, ಆಶಾ ಕೊರಿಯ, ದೀಪ್ತಿ ದಿನ್ ರಾಜ್ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಜ.19 ರಂದು ಯುಎಇ ಯಲ್ಲಿ ದಾಖಲೆಯ 16 ಪ್ರೀಮಿಯರ್ ಶೋ ಈಗಾಗಲೇ ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಪ್ರಶಂಸೆಗೆ ಪಾತ್ರವಾಗಿದೆ.
ಸಿನಿಮಾ ಕೌಟುಂಬಿಕ ಕಥೆಯನ್ನು ಒಳಗೊಂಡಿದೆ. ಹಾಸ್ಯಕ್ಕೆ ಪ್ರಾಮುಖ್ಯತೆ ನೀಡಲಾಗಿದೆ. ‘ರಾಜ್ ಸೌಂಡ್ಸ್‌ ಆಂಡ್ ಲೈಟ್ಸ್’ ಸಿನಿಮಾದಂತೆ ಈ ಸಿನಿಮಾ ಕೂಡಾ ತುಳುಚಿತ್ರರಂಗದಲ್ಲಿ, ದೊಡ್ಡ ಸೌಂಡ್ ಮಾಡಲಿದೆ. ಈಗಾಗಲೇ ಸಿನಿಮಾದ ಟೈಟಲ್ ಸ್ಟ್ಯಾಂಗ್ ಟ್ರೇಲರ್ ಸೂಪರ್ ಹಿಟ್ ಆಗಿದೆ, ಜೊತೆಗೆ ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ಮತ್ತು ನಾಯಕಿ ನಟಿ ಸಮತಾ ಅಮೀನ್ ಜೋಡಿ ಪ್ರೇಕ್ಷಕರಿಗೆ ಮೋಡಿ
ಮಾಡಲಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ನಟ ವಿನೀತ್ ಕುಮಾರ್, ನಿರ್ಮಾಪಕ ಆನಂದ್ ಕುಂಪಲ, ಸುಹಾನ್ ಪ್ರಸಾದ್, ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!