ಕುಂದಾಪುರ: ಮನೆಯಲ್ಲಿ ಚಿನ್ನಾಭರಣ ಕಳವು- ದಂಪತಿಯ ಸೆರೆ

ಉಡುಪಿ: ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಗಂಗೊಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತ್ರಾಸಿ ಬೀಚ್ ಬಳಿಯ ಉದಯ ಪೂಜಾರಿ ಎಂಬವರ ಮನೆಯಲ್ಲಿ ಬ್ಯಾಗ್‌ನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರವನ್ನು ಕಳ್ಳತನ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಪೊಲೀಸರು, ಕುಂದಾಪುರ ಗುಜ್ಜಾಡಿ ನಿವಾಸಿ ವಿನಾಯಕ (41) ಹಾಗೂ‌ ಆತನ ಪತ್ನಿ ಪ್ರಮೀಳಾ(30) ಎಂಬಾಕೆಯನ್ನು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

ಬಂಧಿತರಿಂದ ಕಳವು ಮಾಡಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್-1, 16 ಗ್ರಾಂ ತೂಕದ ಬಳೆ-1 ಹಾಗೂ 3 ಗ್ರಾಂ ತೂಕದ 3 ಚಿನ್ನದ ಉಂಗುರ ಸಹಿತ ಒಟ್ಟು 2 ಲಕ್ಷ ಮೌಲ್ಯದಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಟಿವಿಎಸ್‌ ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿ ಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!