ಗಂಗೊಳ್ಳಿ: ಪಿಡಿಓ, ಸಹಾಯಕ ಲೋಕಾಯುಕ್ತ ಬಲೆಗೆ

ಉಡುಪಿ: 9/11 ಮಾಡಿ ಕೊಡಲು 22 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟ ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮಾಶಂಕರ್ ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕ ಶೇಖರ ಬಿ. ಅವರನ್ನು ರೆಡ್ ಹ್ಯಾಂಡ್ ಆಗಿ ಉಡುಪಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರರು ನೀಡಿದ ದೂರಿನಂತೆ ಈ ಕಾರ್ಯಾಚರಣೆ ನಡೆಸಿದ್ದು, ಲೋಕಾಯುಕ್ತ ಅಧೀಕ್ಷಕ ನಟರಾಜ್‌ ಅವರ ಮಾರ್ಗದರ್ಶನದಲ್ಲಿ ಪ್ರಭಾರ ಪೊಲೀಸ್ ಉಪಾಧೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಅಮನುಲ್ಲ ಹಾಗೂ ಚಂದ್ರಶೇಖರ್, ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರೋಹಿತ್, ಪುಷ್ಪಲತಾ, ಮಲ್ಲಿಕಾ, ಅಬ್ದುಲ್ ಜಲಾಲ್ , ಸತೀಶ್ ಹಂದಾಡಿ, ರವೀಂದ್ರ ಗಾಣಿಗ, ಪ್ರಸನ್ನ ದೇವಾಡಿಗ, ರಮೇಶ್, ಸತೀಶ್ ಆಚಾರ್ಯ, ರಾಘವೇಂದ್ರ ಹೊಸಕೋಟೆ, ಸೂರಜ್ ಕಾಪು, ಸುಧೀರ್ ಹಾಗೂ ಮಂಗಳೂರು ಲೋಕಾಯುಕ್ತ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

Leave a Reply

Your email address will not be published. Required fields are marked *

error: Content is protected !!