ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್​ಚಿಟ್?

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ವರದಿಯೊಂದು ತಿಳಿಸಿವೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ಕಂದಾಯ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ.

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಮತ್ತೊಂದೆಡೆ, ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿ ರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ.

Leave a Reply

Your email address will not be published. Required fields are marked *

error: Content is protected !!