ಮಸಾಜ್ ಸೆಂಟರ್ ಮೇಲೆ ದಾಳಿ ಪ್ರಕರಣ: ಪ್ರಸಾದ್ ಅತ್ತಾವರ್ ಸಹಿತ ಮೂವರ ಬಂಧನ
ಮಂಗಳೂರು: ನಗರದ ಬಿಜೈಯ ಮಸಾಜ್ ಸೆಂಟರ್‌ನಲ್ಲಿ ದಾಂಧಲೆ ನಡೆಸಿದ ಪ್ರಕರಣದ ಆರೋಪಿ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಸಹಿತ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ನಗರ ಹೊರವಲಯದ ಕುಡುಪು ಬಳಿಯ ಮನೆಯಿಂದ ಪ್ರಸಾದ್ ಅತ್ತಾವರನನ್ನು ಬಂಧಿಸಲಾಗಿದೆ. ನಗರದ ಮಸಾಜ್ ಸೆಂಟರ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಬಂಧಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಸಾದ್ ಅತ್ತವಾರ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಮ್ಮ ಸಂಘಟನೆಯ ಕಾರ್ಯಕರ್ತರು ಮಸಾಜ್ ಸೆಂಟರ್‌ಗೆ ನುಗ್ಗಿರುವುದಾಗಿ ಪ್ರಸಾದ್ ಅತ್ತಾವರ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದ ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.