ಉಡುಪಿ: ಅಥ್ಲೆಟಿಕ್ ಅಸೋಸಿಯೇಶನ್ ಜಿಲ್ಲಾ ಕಚೇರಿ ಉದ್ಘಾಟನೆ

ಉಡುಪಿ, ಜ.24: ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇದರ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಹರಿಪ್ರಸಾದ್ ರೈ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು,ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಅವರ ಮನೆಗೆ ಸೌಹಾರ್ದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ ಅಭಯ ಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!