ಉಡುಪಿ ವಕೀಲರ ಸಂಘದಿಂದ ಸುಪ್ರೀಮ್ ಕೋರ್ಟ್ ನ್ಯಾ.ಬಿ.ವಿ. ನಾಗರತ್ನ ಭೇಟಿ
ಉಡುಪಿ ವಕೀಲರ ಸಂಘದ ನಿಯೋಗವು ಸುಪ್ರೀಮ್ ಕೋರ್ಟಿನ ಗೌರವಾನ್ವಿತ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಇವರನ್ನು ಇತ್ತೀಚಿಗೆ ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾಗಿ ಮಾರ್ಚ್ 1 ಮತ್ತು 2ರಂದು ಎಮ್.ಜಿ.ಎಮ್. ಕಾಲೇಜಿನ ಎ.ಎಲ್.ಎನ್. ರಾವ್ ಕ್ರೀಡಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯಮಟ್ಟದ ವಕೀಲರ ಕ್ರಿಕೆಟ್ – ವಾಲಿಬಾಲ್ – ತ್ರೋಬಾಲ್ ಮತ್ತು ಶಟಲ್ ಬ್ಯಾಡ್ಮಿಂಟನ್ ಟೂರ್ನಮೆಂಟ್ ಗಳನ್ನು ಉದ್ಘಾಟಿಸುವಂತೆ ಆಹ್ವಾನಿಸಿತು.
ಇದಕ್ಕೆ ಸಮ್ಮತಿಸಿದ ನ್ಯಾಯಮೂರ್ತಿಗಳು, ಪಂದ್ಯಾಟಕ್ಕೆ ಶುಭ ಹಾರೈಸಿದರು. ನಿಯೋಗದಲ್ಲಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಕ್ರೀಡಾಕೂಟದ ಸಂಚಾಲಕ ಮಿತ್ರ ಕುಮಾರ್ ಶೆಟ್ಟಿ, ಮಾಜಿ ಅಧ್ಯಕ್ಷ ಟಿ. ವಿಜಯ ಕುಮಾರ್ ಶೆಟ್ಟಿ ಹಾಗೂ ಕ್ರೀಡಾಕೂಟದ ಆಹ್ವಾನ ಸಮಿತಿ ಸಂಯೋಜಕ ಆರೂರ್ ಸುಕೇಶ್ ಶೆಟ್ಟಿ ಉಪಸ್ಥಿತರಿದ್ದರು.