ಸಿಎಂ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್ ರಾಜೀನಾಮೆ
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರನ್ನು ಸಿಎಂ ಮಾಧ್ಯಮ ಸಲಹೆಗಾರರಾಗಿ ನೇಮಕ ಮಾಡಲಾಗಿತ್ತು. ಇದೀಗ ಸಿಎಂ ಮಾಧ್ಯಮ ಸಲಹೆಗಾರ ಹುದ್ದೆಗೆ ಮಹದೇವ್ ಪ್ರಕಾಶ್ ಅವರು ರಾಜೀನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಮಹದೇವ ಪ್ರಕಾಶ್ ಅವರು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.