ಉಡುಪಿ: ಪ್ರತ್ಯೇಕ ಪ್ರಕರಣ ಮೂವರ ಆತ್ಮಹತ್ಯೆ

ಕುಂದಾಪುರ, ಜ.27: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೀಜಾಡಿ ಗ್ರಾಮ ಶಶಿಧರ ಎಂಬವರ ಪತ್ನಿ ವಿಮಲ(63) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.26ರಂದು ಮಧ್ಯಾಹ್ನ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಣಿಪಾಲ: ವಿಪರೀತ ಕುಡಿತದ ಚಟವನ್ನು ಹೊಂದಿದ್ದ ಮರ್ಣೆ ಗ್ರಾಮದ ಕೊಜಪಾಡಿ ನಿವಾಸಿ ಭಾಸ್ಕರ ಎಂಬವರ ಮಗ ಪ್ರಸಾದ್(33) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜ.26ರಂದು ರಾತ್ರಿ ಮನೆಯ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಬೀಜಾಡಿ ಗ್ರಾಮದ ಸುನೀಲ್ ಕುಮಾರ್ (40) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜ.6ರಂದು ರಾತ್ರಿ ವೇಳೆ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!