ಆದರ್ಶ ಆಸ್ಪತ್ರೆ ಉಡುಪಿ: ಗರ್ಭಕಂಠದ ಕ್ಯಾನ್ಸರ್ ಜಾಗೃತಿ ತಪಾಸಣಾ ಶಿಬಿರ

ಉಡುಪಿ, ಜ.29: ನಗರದ ಪ್ರಸಿದ್ಧ ಆದರ್ಶ ಆಸ್ಪತ್ರೆಯ ವತಿಯಿಂದ ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಕ್ಯಾನ್ಸರ್ ತಪಾಸಣಾ ಶಿಬಿರವು ಉಡುಪಿಯ ಆದರ್ಶ ಆಸ್ಪತ್ರೆಯ ನ್ಯೂ ಒಪಿಡಿಯಲ್ಲಿ ನಡೆಯಿತು.

ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ. ಎಸ್.ಚಂದ್ರ ಶೇಖರ್ ಹಾಗೂ ಇತರ ಗಣ್ಯರು ಸಾಂಕೇತಿಕವಾಗಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇನ್ನರ್ ವೀಲ್ ಕ್ಲಬ್‌ನ ಅಧ್ಯಕ್ಷೆ ಸುರೇಖಾ ಅವರು ಮಾತನಾಡಿ, ನಮ್ಮ ಸಂಘವು ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕಷ್ಟದಲ್ಲಿರುವವರಿಗೆ ಸಹಾಯ ಮಾಡುವಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ನಾವು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮವ ನ್ನು ಆಯೋಜಿಸಲು ಯೋಚಿಸಿದಾಗ, ಇತರ ಸ್ಥಳಗಳಲ್ಲಿ, ಭಯದಿಂದ ಯಾವುದೇ ಮಹಿಳೆಯರು ಮುಂದೆ ಬರಲಿಲ್ಲ. ಈ ಕಾರ್ಯಕ್ರಮ ಆಯೋಜಿಸಲು ನಮಗೆ ಅವಕಾಶವನ್ನು ಒದಗಿಸಿದ್ದಕ್ಕಾಗಿ ನಾವು ಆಸ್ಪತ್ರೆಗೆ ಕೃತಜ್ಞರಾಗಿರುತ್ತೇವೆ, ಆದರ್ಶ ಆಸ್ಪತ್ರೆಯನ್ನು ಬೆಂಬಲಿಸಲು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ನಾವು ಬಯಸುತ್ತೇವೆ ಎಂದರು.

ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ರಂಜಿತಾ ಎಸ್ ನಾಯಕ್ ಅವರು ಮಾತನಾಡಿ, ಜನವರಿ ತಿಂಗಳನ್ನು ಗರ್ಭಕಂಠದ ಕ್ಯಾನ್ಸರ್ ಜಾಗೃತಿ ಮಾಸವಾಗಿ ಆಚರಿಸಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್ ಹೇಗೆ ಉಂಟಾಗುತ್ತದೆ ಮತ್ತು ಅದನ್ನು ನಾವು ಹೇಗೆ ತಡೆಯಬಹುದು ಎಂಬುದನ್ನು ಜನರಿಗೆ ತಿಳಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ರಂಜಿತಾ ಎಸ್.ನಾಯಕ್ ಮತ್ತು ಸಲಹೆಗಾರರಾದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ದಮಯಂತಿ ಅವರಿಂದ HPV ಲಸಿಕೆ ಜಾಗೃತಿ ನಡೆಯಿತು.

ಶಿಬಿರದಲ್ಲಿ ವೈದ್ಯರ ಸಮಾಲೋಚನೆಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಯಿತು. ಗರ್ಭಕಂಠದ ಕ್ಯಾನ್ಸರ್ ಪತ್ತೆ ಮಾಡುವ ಪ್ಯಾಪ್ ಸ್ಮೀಯರ್ ಅನ್ನು ಶೇಕಡಾ 50 ರಷ್ಟು ರಿಯಾಯಿತಿಯೊಂದಿಗೆ ಮತ್ತು 1600 ರೂಪಾಯಿಗಳ ರಿಯಾಯಿತಿ ದರದಲ್ಲಿ ನೀಡಲಾದ HPV ಲಸಿಕೆಯನ್ನು ಒದಗಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಸಮಾಲೋಚಕಿ ಡಾ.ದಮಯಂತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಮಲಾ ಚಂದ್ರಶೇಖರ್, ಇನ್ನರ್ ವೀಲ್ ಕ್ಲಬ್ ಕಾರ್ಯದರ್ಶಿ ಪದ್ಮಿನಿ ಭಟ್, ವಿದ್ಯಾರ್ಥಿಗಳು, ಸಿಬ್ಬಂದಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!