ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ಯಾವುದೇ ರಾಜ್ಯದಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶವೊಂದನ್ನ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಸುಪ್ರೀಂ ಕೋರ್ಟ್, ಯಾವುದೇ ರಾಜ್ಯದಲ್ಲಾಗಲಿ ಸಿಬಿಐ ತನಿಖೆಗೆ ಮುನ್ನ ಆಯಾ ರಾಜ್ಯದ ಒಪ್ಪಿಗೆ ಪಡೆದಿರಬೇಕು.
ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ರೆ, ಸಿಬಿಐ ಯಾವುದೇ ತನಿಖೆ ನಡೆಸಲು ಸಾಧ್ಯವಿಲ್ಲ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ನಿರ್ಧಾರ ತೆಗದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಸ್ಪಷ್ಟವಾಗಿ ತಿಳಿಸಿದೆ. ಉತ್ತರ ಪ್ರದೇಶದಲ್ಲಿ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಮಹತ್ವದ ಆದೇಶ ನೀಡಿದ್ದು, ಕಾನೂನಿನ ಪ್ರಕಾರ ರಾಜ್ಯದ ಒಪ್ಪಿಗೆ ಇಲ್ಲದೆ ಕೇಂದ್ರ ಸರ್ಕಾರ ಸಿಬಿಐ ಅಧಿಕಾರ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಹೇಳಿದೆ.