ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ- ಮಹಾಕುಂಭ ಮೇಳಕ್ಕೆ ಹೊರಟ 18 ಯಾತ್ರಿಕರ ಮೃತ್ಯು
ನವದೆಹಲಿ: ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು ರದ್ದುಗೊಳಿಸಿದ್ದರಿಂದ ಏಕಾಏಕಿ ನೂಕುನುಗ್ಗಲು ಉಂಟಾಗಿದ್ದು ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.
‘ರೈಲ್ವೆ ಪೊಲೀಸರು ಮತ್ತು ದೆಹಲಿ ಪೊಲೀಸರು ನಿಲ್ದಾಣ ತಲುಪಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ’ ಎಂದು ಭಾರತೀಯ ರೈಲ್ವೆಯು ತಿಳಿಸಿದೆ.





