ಕೊರೋನಾ 2ನೇ ಅಲೆ: ಮುಂಬೈನಲ್ಲಿ ಶಾಲೆ-ಕಾಲೇಜ್ ಗಳ ಪುನರಾರಂಭ ಡಿ.31ಕ್ಕೆ ಮುಂದೂಡಿಕೆ

ಮುಂಬೈ: ಮುಂಬೈನಲ್ಲಿ ಮಹಾಮಾರಿ ಕೊರೋನಾ ವೈರಸ್ ನ ಎರಡನೇ ಅಲೆ ಆರಂಭವಾಗಿದ್ದು, ದೇಶದ ವಾಣಿಜ್ಯ ನಗರಿಯಲ್ಲಿ ಶಾಲಾ-ಕಾಲೇಜ್ ಗಳನ್ನು ಡಿಸೆಂಬರ್ 31ರ ವರೆಗೆ ಬಂದ್ ಮಾಡಲು ನಿರ್ಧರಿಸಲಾಗಿದೆ.

ನವೆಂಬರ್ 23ರಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದಾದ್ಯಂತ ಶಾಲಾ-ಕಾಲೇಜ್ ಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಆದರೆ ಕೊರೋನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೃಹನ್ ಮುಂಬೈ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜ್ ಗಳ ಪುನರಾರಂಭವನ್ನು ಡಿಸೆಂಬರ್ 31ಕ್ಕೆ ಮುಂದೂಡಲಾಗಿದೆ.

ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದಿಂದ ಮುಂಬೈನಲ್ಲಿ ಶಾಲೆಗಳು ಆರಂಭವಾಗುವುದಿಲ್ಲ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೆಕರ್ ಅವರು ಹೇಳಿದ್ದಾರೆ.

ಮುಂಬೈನಲ್ಲಿ ಗುರುವಾರ 924 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ನಗರದ ಸೋಂಕಿತರ ಸಂಖ್ಯೆಯನ್ನು 2,72,449 ಕ್ಕೆ ತಲುಪಿದೆ.

Leave a Reply

Your email address will not be published. Required fields are marked *

error: Content is protected !!