ದೆಹಲಿಗೆ ಮತ್ತೆ ಮಹಿಳಾ ಸಿಎಂ: ಹೆಸರು ಘೋಷಿಸಿದ ಬಿಜೆಪಿ!

Oplus_131072

ನವದೆಹಲಿ: ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಫೆಬ್ರವರಿ 5ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ 26 ವರ್ಷಗಳ ವನವಾಸ ಅಂತ್ಯಗೊಂಡಿತ್ತು. ಇದೀಗ ದೆಹಲಿ 11 ದಿನಗಳ ಬಳಿಕ ಸಿಎಂ ಹೆಸರನ್ನು ಬಿಜೆಪಿ ಘೋಷಿಸಿದೆ.

ಪ್ರಸ್ತುತ ಭಾರತೀಯ ಜನತಾ ಪಕ್ಷ ಆಳುತ್ತಿರುವ ರಾಜ್ಯಗಳಲ್ಲಿ ಏಕೈಕ ಮಹಿಳಾ ಮುಖ್ಯಮಂತ್ರಿಯಾಗಿರು ವ ರೇಖಾ ಗುಪ್ತಾ, ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದರು. ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ರೇಖಾ ಹೆಸರನ್ನು ಘೋಷಿಸಲಾಯಿತು.

ಕೇಸರಿ ಪಕ್ಷವು 70 ಸದಸ್ಯರ ವಿಧಾನಸಭೆಯಲ್ಲಿ 48 ಸ್ಥಾನಗಳನ್ನು ಗೆಲ್ಲುವ ಮೂಲಕ ಆಮ್ ಆದ್ಮಿ ಪಕ್ಷದ (ಎಎಪಿ) ದಶಕದ ಆಡಳಿತವನ್ನು ಕೊನೆಗೊಳಿಸಿತು. ಆಮ್ ಆದ್ಮಿ ಪಕ್ಷವು ಕೇವಲ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಯಿತು. ಅರವಿಂದ್ ಕೇಜ್ರಿವಾಲ್ ಅವರು ನವದೆಹಲಿ ಕ್ಷೇತ್ರ ಮತ್ತು ಮನೀಶ್ ಸಿಸೋಡಿಯಾ ಅವರು ಜಂಗ್ಪುರದಿಂದ ಸೋತಿದ್ದರು.

Leave a Reply

Your email address will not be published. Required fields are marked *

error: Content is protected !!