ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ಮಹತ್ವಪೂರ್ಣ: ಕುಯಿಲಾಡಿ

ಉಡುಪಿ: ಬಿಜೆಪಿಯ ಜಿಲ್ಲಾ ಪ್ರಕೋಷ್ಠಗಳು ಸಮಾಜದ ವಿವಿಧ ವರ್ಗ ಮತ್ತು ಕ್ಷೇತ್ರಗಳ ಜನತೆಯನ್ನು ಸಂಘಟಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಸದುದ್ದೇಶವನ್ನು ಹೊಂದಿವೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿವಿಧ ಯೋಜನೆಗಳನ್ನು ಜನತೆಗೆ ತಲುಪಿಸುವ ಜೊತೆಗೆ ಪಕ್ಷದ ಯೋಚನೆ-ಯೋಜನೆಗಳ ಅನುಷ್ಠಾನಕ್ಕೆ ಒತ್ತು ನೀಡುವ ಮೂಲಕ ಪಕ್ಷ ಸಂಘಟನೆಯಲ್ಲಿ ಪ್ರಕೋಷ್ಠಗಳ ಪಾತ್ರ ಮಹತ್ವಪೂರ್ಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪ್ರಕೋಷ್ಠಗಳ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ ಇಂದು ಸರ್ವ ಸ್ಪರ್ಶಿ ಸರ್ವ ವ್ಯಾಪಿಯಾಗಿದೆ. ಬಿಜೆಪಿಯ ಸಾಮಾನ್ಯ ಕಾರ್ಯಕರ್ತನೂ ಬದ್ಧತೆ ಮತ್ತು ಪಕ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿ ಉನ್ನತ ಸ್ಥಾನವನ್ನೇರಿರುವ ಅನೇಕ ಉದಾಹರಣೆಗಳಿವೆ. ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿ ಅವಕಾಶಗಳಾಗಿ ಪರಿವರ್ತಿಸಿಕೊಳ್ಳುವುದು ಮುಖ್ಯ. ಈ ನಿಟ್ಟಿನಲ್ಲಿ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಾಮಾಜಿಕ ಸ್ಪಂದನೆಯ ಜೊತೆಗೆ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಅತ್ಯಂತ ಕ್ರಿಯಾಶೀಲತೆಯಿಂದ ತೊಡಗಿಸಿಕೊಂಡು ಮುಂಬರಲಿರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸುವತ್ತ ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಸಂಘಟನಾತ್ಮಕ ವಿಚಾರಗಳನ್ನು ಮಂಡಿಸಿದರು. ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು ಮತ್ತು ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!