ಏಪ್ರಿಲ್ 1ರಿಂದ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದಿಲ್ಲ
ಹೊಸದಿಲ್ಲಿ: ದಿಲ್ಲಿಯಲ್ಲಿ ಮಾಲಿನ್ಯ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆ ಇಟ್ಟಿರುವ ನೂತನ ಬಿಜೆಪಿ ಸರಕಾರ, 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಏಪ್ರಿಲ್ 1ರಿಂದ ಪಂಪ್‌ಗಳಲ್ಲಿ ಪೆಟ್ರೋಲ್ ತುಂಬಲು ಅನುಮತಿಸುವುದಿಲ್ಲ ಎಂದು ತಿಳಿಸಿದೆ.
ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಈ ಕುರಿತು ಮಾಹಿತಿ ನೀಡಿದ್ದು, ದಿಲ್ಲಿಯಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಪತ್ತೆಹಚ್ಚಲು ತಂಡವನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.
ನಾವು ಪೆಟ್ರೋಲ್ ಪಂಪ್‌ಗಳಲ್ಲಿ ಗ್ಯಾಜೆಟ್‌ಗಳನ್ನು ನಿರ್ಮಿಸುತ್ತೇವೆ. ಈ ಮೂಲಕ 15 ವರ್ಷಗಳಿಗಿಂತ ಹಳೆಯದಾದ ವಾಹನಗಳನ್ನು ಗುರುತಿಸಿ ಅವುಗಳಿಗೆ ಇಂಧನವನ್ನು ನೀಡದಿರಲು ತೀರ್ಮಾನಿಸಲಾಗುವುದು ಎಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಂಜಿಂದರ್ ಸಿರ್ಸಾ ಹೇಳಿದರು.





