ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಮತ್ತೆ ಸಿಬಿಐನಿಂದ ಶಾಕ್…!

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸ, ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ ಬಳಿಕ ಇದೀಗ ಸಿಬಿಐ ಡಿಕೆಶಿ ಅವರಿಗೆ ಮತ್ತೊಮ್ಮೆ ಶಾಕ್ ನೀಡಿದೆ. ಪ್ರಕರಣಕ್ಕೆ ಸಂಬoಧಿಸಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ನವೆಂಬರ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸೂಚಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು, ಸಿಬಿಐ ನಿಂದ ವಿಚಾರಣೆಗೆ ಹಾಜರಾಗುವಂತೆ ಕರೆಯಲಾಗಿದೆ, “ನ.19ರಂದು ನಾನು ಕಾರ್ಯಕ್ರಮದಲ್ಲಿದ್ದೆ. ಆಗ ನಮ್ಮ ಕಚೇರಿಗೆ ಬಂದು ಸಮನ್ಸ್ ಕೊಟ್ಟು ಹೋಗಿದ್ದಾರೆ. 23ಕ್ಕೆ ಹಾಜರಾಗುವಂತೆ ಹೇಳಿದ್ದಾರೆ. ನಾಳೆಯಿಂದ ಉತ್ತರ ಕರ್ನಾಟಕ ಪ್ರವಾಸ ಆಯೋಜಿಸಲಾಗಿದೆ. ನಾನು ಸಿಬಿಐ ಅಧಿಕಾರಿಗೆ ಕರೆ ಮಾಡಿ ಮನವಿ ಮಾಡಿ, ನಾನು ಉತ್ತರ ಕರ್ನಾಟಕ ಪ್ರವಾಸ ಇರುವುದರಿಂದ 25ಕ್ಕೆ ಹಾಜರಾಗುತ್ತೇನೆ ಅಂತ ಕೇಳಿಕೊಂಡಿದ್ದು, ಅದಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!