ಮತ್ಸ್ಯ ಸಂಪದ ಯೋಜನೆಗೆ ಸಿಎಂ ಚಾಲನೆ: ಆರ್ಡರ್ ಮಾಡಿದ ಗಂಟೆಯೊಳಗೆ ಮನೆ ಬಾಗಿಲಿಗೆ ತಾಜಾ ಮೀನು
ಬೆಂಗಳೂರು: ವಿಶ್ವ ಮೀನುಗಾರಿಕಾ ದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿಂದು ಏರ್ಪಡಿಸಿದ್ದ ಮತ್ಸ್ಯ ಸಂಪದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದರು.
ಮೀನುಗಾರಿಕಾ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಕುಮಾರ ಬಂಗಾರಪ್ಪ, ಶಾಸಕ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ಮತ್ಸ್ಯಸಿರಿ, ಸಾಗರೋತ್ಪನ್ನ ಖಾದ್ಯಗಳ ಬಿಡುಗಡೆ ಮಾಡಿದ ಮುಖ್ಯಮಂತ್ರಿಯವರು, ಸುವರ್ಣ ತ್ರಿಭುಜ ಮೀನುಗಾರಿಕೆ ದೋಣಿ ಅವಘಡದಲ್ಲಿ ಮೃತರಾದ ಏಳು ಮೀನುಗಾರರ ಕುಟುಂಬಗಳಿಗೆ ತಲಾ 10 ಲಕ್ಷ ರೂ ಪರಿಹಾರ ವಿತರಿಸಿದರು.