ಶಾಲೆ ಪುನರಾರಂಭ: ನಾಳೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಪುನರಾರಂಭಿಸುವ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಸಭೆ ನಡೆಯಲಿದ್ದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಮತ್ತು ಇಲಾಖೆಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

‘ಶಾಲೆಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸಿದ್ಧಪಡಿಸಿದ ವರದಿಯನ್ನು ಸಚಿವರು, ಮುಖ್ಯಮಂತ್ರಿಯವರ ಮುಂದಿಡುವರು. ಪೋಷಕರು, ವಿದ್ಯಾರ್ಥಿಗಳು, ಶಾಲಾ ಆಡಳಿತ ಮಂಡಳಿಗಳು, ಶಿಕ್ಷಕರು ನೀಡಿದ ಅಭಿಪ್ರಾಯಗಳು ಈ ವರದಿಯಲ್ಲಿವೆ’ ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಇಲಾಖೆಯ ಆಯುಕ್ತ ಅನ್ಬುಕುಮಾರ್‌, ಡಿಸೆಂಬರ್‌ ಎರಡನೇ ವಾರದಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಲಾ–ಕಾಲೇಜು ಪ್ರಾರಂಭಿಸಬಹುದು ಎಂದು ನ.9ರಂದು ಶಿಫಾರಸು ಮಾಡಿದ್ದರು.

 

Leave a Reply

Your email address will not be published. Required fields are marked *

error: Content is protected !!