ಉಚ್ಚಿಲ: ಲಾರಿ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ದಾರುಣ ಮೃತ್ಯು
ಪಡುಬಿದ್ರಿ: (ಉಡುಪಿಟೈಮ್ಸ್ ವರದಿ) ರಾಷ್ಟ್ರೀಯ ಹೆದ್ಗಾರಿ 66 ಉಚ್ಚಿಲದಲ್ಲಿ ಲಾರಿಯ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಬಿ ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಉಚ್ಚಿಲ ಪೇಟೆಯಿಂದ ಪಡುಬಿದ್ರಿ ಕಡೆಗೆ ಸ್ಕೂಟರ್ ಸವಾರಿ ಮಾಡಿಕೊಂಡು ಹೋಗುತ್ತಿದ್ದ ಸವಾರ, ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಸಲಿಸುತ್ತಿದ್ದ ಲಾರಿಯ ಚಕ್ರಕ್ಕೆ ಸಿಲುಕಿದ್ದರು.
ಗಂಭೀರವಾಗಿ ಗಾಯಗೊಂಡ ವಾಸು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ಸ್ಥಳೀಯರು ತಿಳಿಸಿದ್ದಾರೆ.
.