ಕೇಂದ್ರ ಸರ್ಕಾರದ ಆರ್ಥಿಕ ನೀತಿಗೆ ವಿರೋಧ: ನ.26 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ

ನವದೆಹಲಿ:ದೇಶದಲ್ಲಿ ಆರ್ಥಿಕ ಸ್ಥಿತಿ ಕುಸಿಯುತ್ತಿದ್ದರೂ, ಸರ್ಕಾರವು ವ್ಯವಹಾರವನ್ನು ಸುಲಭಗೊಳಿಸುವ ಹೆಸರಿನಲ್ಲಿ ತನ್ನ ನೀತಿಗಳನ್ನು ಮುಂದುವರೆಸುತ್ತಿದೆ. ಇದರಿಂದ ವ್ಯಾಪಕ ಬಡತನ ಉಲ್ಬಣಗೊಳ್ಳಲಿದೆ ಮತ್ತು ಬಿಕ್ಕಟ್ಟು ಮತ್ತಷ್ಟು ಹೆಚ್ಚಾಗಲಿದೆ ಎಂದು ಕಾರ್ಮಿಕ ಸಂಘಟನೆಗಳು ತಿಳಿಸಿದ್ದು, ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಒಕ್ಕೂಟಗಳು ಹಾಗೂ ಕಾಂಗ್ರೆಸ್ ಅಂಗ ಪಕ್ಷಗಳು ನವೆಂಬರ್ 26ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ.

16 ಎಡ ಸಂಘಟನೆಗಳು ಹಾಗೂ ಕಾಂಗ್ರೆಸ್ ಕರೆ ಕೊಟ್ಟಿರುವ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಪ್ರತಿಪಕ್ಷ ಕಾಂಗ್ರೆಸ್‌ಗೆ ಅದರ ಮಿತ್ರ ಪಕ್ಷಗಳು ಕೈಜೋಡಿಸಲಿವೆ ಎನ್ನಲಾಗುತ್ತಿದ್ದು, ದೇಶದ ಹಲವು ಭಾಗಗಳಲ್ಲಿ ಸಾಮಾನ್ಯ ಜನಜೀವನದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಐಎನ್‌ಟಿಯುಸಿ, ಎಐಟಿಯುಸಿ, ಎಚ್‌ಎಂಎಸ್, ಸಿಐಟಿಯು, ಎಐಯುಟಿಯುಸಿ, ಟಿಯುಸಿಸಿ, ಸೆವಾ (ಎಸ್‌ಇಡಬ್ಲ್ಯುಎ), ಎಐಸಿಸಿಟಿಯು, ಎಲ್‌ಪಿಎಫ್, ಯುಟಿಯುಸಿ ಮತ್ತು ಸ್ವತಂತ್ರ ಒಕ್ಕೂಟಗಳು ಹಾಗೂ ಇತರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ.

Leave a Reply

Your email address will not be published. Required fields are marked *

error: Content is protected !!