ಹೆಚ್ಚುತ್ತಿರುವ ಕೊರೋನಾ: ಸಿಎಂಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಚರ್ಚೆ
ನವದೆಹಲಿ: ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ೧೯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು, ಕೋವಿಡ್ ಪ್ರಕರಣಗಳು ಏರಿಕೆಯಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚರ್ಚಿಸಿ, ಪರಿಸ್ಥಿತಿಯ ವಿವರ ಪಡೆದರು. ಈ ವೇಳೆ ಕೋವಿಡ್ ಲಸಿಕೆ ವಿತರಣೆ ಕಾರ್ಯತಂತ್ರ ಕುರಿತಂತೆಯೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಅಧಿಕಾರಿಗಳ ಜೊತೆಗೆ ಪ್ರಧಾನಿ ಚರ್ಚಿಸಿದರು.
ಇದರ ಜೊತೆಗೆ ಕೊರೋನಾ ಹೆಚ್ಚುತ್ತಿರುವ ರಾಜ್ಯಗಳಲ್ಲಿ ಕರ್ಫ್ಯೂ ಜಾರಿ ಕುರಿತು ಸಹ ಸಮಾಲೋಚನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ವಿಡಿಯೋ ಸಂವಾದದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್, ರಾಜಸ್ಥಾನ ಮುಂಖ್ಯಮ0ತ್ರಿ ಅಶೋಕ್ ಗೆಹ್ಲೋಟ್, ಪಶ್ಚಿಮ ಬಂಗಾಳ ಮುಂಖ್ಯಮ0ತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾಣಿ ಅವರು ಭಾಗವಹಿಸಿದ್ದರು.