ಉಡುಪಿ ಎಸ್ಪಿ ಡಾ. ಅರುಣ್, ಎಸ್ಸೈ ವೈಲೆಟ್ ಫೆಮಿನಾ ಸಹಿತ ನಾಲ್ವರಿಗೆ ‘ಡಿಜಿ – ಐಜಿಪಿ ಪ್ರಶಂಸಾ ಪದಕ’

ಉಡುಪಿ, ಮೇ 18: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರಂಭಿಸಲಾದ ‘ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ’ 2024-25ನೇ ಸಾಲಿನ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಕೆ.ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.

ಮಲ್ಪೆ ಕರಾವಳಿ ಕಾವಲು ಪೊಲೀಸ್‌ನ ಎಸ್ಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಆರ್ಮ್ಡ್ ಹೆಡ್‌ ಕಾನ್‌ಸ್ಟೇಬಲ್ ಸಂತೋಷ್ ಗುಲ್ವಾಡಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಈ ಪದಕವನ್ನು ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!