ಕೋಮು ಪ್ರಚೋದನಾಕಾರಿ ಭಾಷಣ ಆರೋಪ: ಅರುಣ್ ಪುತ್ತಿಲ ವಿರುದ್ಧ ಮತ್ತೊಂದು ಕೇಸ್ ದಾಖಲು
ಪುತ್ತೂರು: ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿ ಖಂಡಿಸಿ ಪುತ್ತೂರಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಕೋಮು ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ಅರುಣ್ ಕುಮಾರ್ ಪುತ್ತಿಲಗೆ ನೋಟೀಸ್ ಜಾರಿ ಮಾಡಿದ್ದಾರೆ.
ಪುತ್ತೂರಿನ ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಬೆಳ್ತಂಗಡಿಯ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಅಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ, ಸಂಘ ಪರಿವಾರದ ಮುಖಂಡ ಭರತ್ ಕುಮ್ಡೇಲು ಸೇರಿದಂತೆ 36 ಮಂದಿಯನ್ನು ದ.ಕ. ಜಿಲ್ಲೆಯಿಂದ ಗಡಿಪಾರು ಮಾಡಲು ಈಗಾಗಲೇ ಕಾನೂನು ಪ್ರಕ್ರಿಯೆ ಆರಂಭಗೊಂಡಿದೆ.
ದ.ಕ. ಜಿಲ್ಲೆಯಿಂದ ಗಡಿಪಾರುವ ಮಾಡುವ ಸಂಬಂಧ ಉಪ ವಿಭಾಗದ ದಂಡಾಧಿಕಾರಿ ಮೂಲಕ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿಯಾಗಿದೆ.





