ಉಡುಪಿ ಜಿಲ್ಲಾ ಕಾಂಗ್ರೆಸ್: ಹಿಂದುಳಿದ ವರ್ಗಗಳ ಅಧ್ಯಕ್ಷರಾಗಿ ನ್ಯಾಯವಾದಿ ಸಂಕಪ್ಪ ಎ. ನೇಮಕ
November 25, 2020
ಉಡುಪಿ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಸಂಕಪ್ಪ ಎ. ರನ್ನು ರಾಜ್ಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.